ಗುಂಡ್ಲುಪೇಟೆ(ಚಾಮರಾಜನಗರ): ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ಐಟಿಐ ಕಾಲೇಜು ರಸ್ತೆ ಬಳಿಯ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ನಡೆದಿದೆ.
ಕೇರಳದ ಕಣ್ಣೂರಿನ ಜಾರ್ಜ್ ಕುಟ್ಟಿ ಜೇಮ್ಸ್(30)ಮೃತ ವ್ಯಕ್ತಿಯಾಗಿದ್ದು, ಈತ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ಕನಕಪುರದ ಶೇಖರ್ ಮತ್ತು ಸೌಂದರ್ಯ ಇಬ್ಬರಿಗು ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ ಮಾಡಲಾಗಿದೆ. ಇನ್ನು ಮೃತ ದೇಹವನ್ನು ಬೇಗೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಹೊಡೆದ ರಭಸಕ್ಕೆ ಮೃತ ಜಾರ್ಜ್ ಕುಟ್ಟಿ ಜೇಮ್ಸ್ ಚಲಾಯಿಸುತ್ತಿದ್ದ ರಾಯಲ್ ಎನ್ ಫೀಲ್ಡ್ ಬೈಕ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಕೂಡಲೇ ಬೇಗೂರು ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲನೆ ನಡೆಸಿ ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಸಿಕೊಂಡಿದ್ದಾರೆ.
ಇದನ್ನೂ ಓದಿ : ಅಕ್ರಮಗಳಿಗೆ ಕಡಿವಾಣ ಹಾಕಿ ಮನ್ಮುಲ್ ಆಡಳಿತ ಮಂಡಳಿಯಿಂದ ಹೆಚ್ಚಿನ ಒತ್ತು ನೀಡಿ ಕೆಲಸ: ಶಾಸಕ