Advertisement
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರು ತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ನಡುವೆ ಗುಂಡ್ಯ ಸಮೀಪ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗೊಂಡ ಹಲವು ಪ್ರಯಾಣಿಕರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ.