Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗ್ಗೆ 11ಕ್ಕೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಇದುವರೆಗೆ ನಡೆದ ಎಲ್ಲ ಪ್ರಕ್ರಿಯೆಗಳ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಗ್ಯಾರಂಟಿ ಜಾರಿಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಮಂಗಳ ವಾರ ತಮ್ಮೆಲ್ಲ ಸಂಪುಟ ಸಹೋದ್ಯೋಗಿಗಳ ಜತೆಗೆ ಚರ್ಚೆ ನಡೆಸಿದ್ದರು. ಹಣಕಾಸು ಹಾಗೂ ಪ್ರಮುಖ ಇಲಾಖೆ ಅಧಿಕಾರಿಗಳು ಸಭೆ ಯ ಲ್ಲಿ ಭಾಗಿಯಾಗಿದ್ದರು.
ಐದು ಗ್ಯಾರಂಟಿಗಳನ್ನು ಸರಕಾರ ಏಕಕಾಲಕ್ಕೆ ಜಾರಿ ಮಾಡುವ ಸಾಧ್ಯತೆ ಕಡಿಮೆ ಇದೆ ಎಂಬ ಮಾತುಗಳು ಕೇಳಿಬಂದಿವೆ. ಐದರ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪಾಸ್, ಅನ್ನಭಾಗ್ಯ ಹಾಗೂ ನಿರುದ್ಯೋಗಿ ಪದವೀ ಧರ ರಿಗೆ ಸ್ಕಾಲರ್‌ಶಿಪ್ ಯೋಜನೆ ಯುವನಿಧಿ ಮಾತ್ರ ಜಾರಿ ಯಾಗಬಹುದು. 200 ಯುನಿಟ್ ಉಚಿತ ವಿದ್ಯುತ್ ಹಾಗೂ ಮನೆಯೊಡತಿಗೆ ಮಾಸಿಕ 2,000 ರೂ. ನೀಡುವ ಯೋಜನೆಗಳ ಜಾರಿಗಾಗಿ ನಿಯಮಾವಳಿ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಬಹುದು ಎಂದು ಹೇಳ ಲಾಗುತ್ತಿದೆ. ಆದರೆ ಇದ್ಯಾವುದರ ಬಗ್ಗೆಯೂ ಸ್ಪಷ್ಟ ಮಾಹಿತಿ ನೀಡಲು ಸರಕಾರದ ಮೂಲಗಳು ನಿರಾಕರಿಸಿವೆ.
Related Articles
Advertisement
ಜಾರಿ ಅನಿವಾರ್ಯಚುನಾವಣ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಗ್ಯಾರಂಟಿಗಳ ಜಾರಿಗೆ ಕಾಂಗ್ರೆಸ್ ಸರಕಾರ ರಚನೆ ಯಾದ ದಿನದಿಂದಲೂ ಸಾಕಷ್ಟು ಕಸರತ್ತುಗಳು ನಡೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಸಭೆ ನಡೆಸಿದ ಬಳಿಕ ಗ್ಯಾರಂಟಿಗಳ ಜಾರಿ ಕುರಿತು ಒಂದು ಸ್ಪಷ್ಟ ಸ್ವರೂಪ ದೊರೆತಿದೆ. ಈ ಮಧ್ಯೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಷರತ್ತುಗಳಿಲ್ಲದೆ ಗ್ಯಾರಂಟಿಗಳನ್ನು ಜಾರಿಗೆ ತರಬೇಕೆಂದು ಸರಕಾರಕ್ಕೆ ತಾಕೀತು ಮಾಡಿವೆ. ಜತೆಗೆ ಸಾರ್ವಜನಿಕರಿಂದಲೂ ದಿನೇ ದಿನೆ ಒತ್ತಡ ಹೆಚ್ಚುತ್ತಿದೆ.