ಕಾಪು: ಗುರ್ಮೆ ಫೌಂಡೇಶನ್ (ರಿ.) ಕಳತ್ತೂರು ವತಿಯಿಂದ ಕಾಪು ತಾಲೂಕಿನ ಕಳತ್ತೂರು ಗುರ್ಮೆಯಲ್ಲಿ ನೂತನವಾಗಿ ನಿರ್ಮಿಸಲಾದ ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆ ಮತ್ತು ದಿ| ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ ಪ್ರಯುಕ್ತ ಫೆ. 20ರಂದು ಕಳತ್ತೂರು ಗುರ್ಮೆಯಲ್ಲಿ ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗುರ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ ಹೇಳಿದರು.
ಮಂಗಳವಾರ ಗುರ್ಮೆಯಲ್ಲಿ ಪತ್ರಿಕಾಗೋಷ್ಡಿಯಲ್ಲಿ ಮಾತನಾಡಿದ ಅವರು, ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಸಂಜೆ 4:00 ಗಂಟೆಗೆ ಶ್ರೀಕಾಂತ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ ನೀರುಮಾರ್ಗ ಮತ್ತು ಬಳಗ ಮಂಗಳೂರು ಇವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಸಂಜೆ 4.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಂತ್ವನ ಕಾರ್ಯಕ್ರಮದಡಿ ಸುಮಾರು 500 ಮಂದಿ ಅನಾರೋಗ್ಯ ಪೀಡಿತರಿಗೆ ಧನ ಸಹಾಯ, 280 ಮಂದಿ ಕೊರೊನಾ ವಾರಿಯರ್‍ಸ್ ಗೆ ಸಮ್ಮಾನ, ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಸಹಿತವಾಗಿ ವಿವಿಧ ಸಮುದಾಯ ಆಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬಳಿಕ ಭಜನಾ ಸಂಕೀರ್ತನೆ ಮುಂದುವರಿಯಲಿದೆ. ರಾತ್ರಿ 8 ರಿಂದ ಶ್ರೀ ಗುರು ನರಸಿಂಹ ದಶಾವತಾರ ಯಕ್ಷಗಾನ ಮಂಡಳಿ ಸಾಲಿಗ್ರಾಮ ಇವರಿಂದ ದಕ್ಷ ಯಜ್ಞ – ರಾಜಾ ರುದ್ರಕೋಪ ಎಂಬ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ.
ಸಾಧಕರಿಗೆ ಸಮ್ಮಾನ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಡಾ. ಜೀವನ್ ಕಿಣಿ ಮುಂಬಯಿ, ಸಾಹಿತಿ ಡಾ. ಭರತ್ ಕುಮಾರ್ ಪೊಲಿಪು, ಸೂರಿ ಶೆಟ್ಟಿ ಕಾಪು ಅವರನ್ನು ಸನ್ಮಾನಿಸಲಾಗುವುದು.
ಗಣ್ಯರ ಉಪಸ್ಥಿತಿ : ಸಮಗ್ರ ಕಾರ್ಯಕ್ರಮಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಗೌರಿ ಗದ್ದೆ ಸ್ವರ್ಣ ಪೀಠಿಕಾಪುರದ ಶ್ರೀ ವಿನಯ ಗುರೂಜಿ, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಎಂ.ಜಿ.ಆರ್ ಗ್ರೂಫ್ಸ್‌ನ ಚಯರ್‌ಮೇನ್ ಕೆ. ಪ್ರಕಾಶ್ ಶೆಟ್ಟಿ ಬಂಜಾರ, ಮೂಡಬಿದ್ರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಗುರ್ಮೆ ಫೌಂಡೇಷನ್ ಟ್ರಸ್ಟ್ ನ ಟ್ರಸ್ಟಿ ಸತೀಶ್ ಪಿ. ಶೆಟ್ಟಿ ಗುರ್ಮೆ, ಪ್ರಮುಖರಾದ ಶಾಮ್ ಶೆಟ್ಟಿ ಮುಂಬಯಿ, ಶಿವರಾಮ ಶೆಟ್ಟಿ ಪೈಯ್ಯಾರು, ಅರುಣ್ ಶೆಟ್ಟಿ ಪಾದೂರು, ಕೃಷ್ಣಪ್ರಸಾದ್ ಶೆಟ್ಟಿ, ಗಣೇಶ್ ಶೆಟ್ಟಿ ಪೈಯ್ಯಾರು ಮೊದಲಾದವರು ಉಪಸ್ಥಿತರಿದ್ದರು.