Advertisement

Gurme Suresh Shetty: ಕಡಲ್ಕೊರೆತ ತಡೆಗೋಡೆ ರಚನೆಗೆ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ

10:03 PM Feb 22, 2024 | Team Udayavani |

ಬೆಂಗಳೂರು: ಕಾಪು ವಿಧಾನಸಭಾ ಕ್ಷೇತ್ರದ ಕಡಲ್ಕೊರೆತ ಪ್ರದೇಶಗಳಲ್ಲಿ ತಡೆಗೋಡೆ ರಚನೆಗೆ ಕ್ರಮ ಕೈಗೊಳ್ಳುವಂತೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ವಿಧಾನಸಭೆಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

Advertisement

ಕಾಪು, ಮೂಳೂರು, ಎರ್ಮಾಳು, ಪಡುಬಿದ್ರಿ, ಹೆಜಮಾಡಿ, ಕೈಪುಂಜಾಲು, ಮಟ್ಟು, ಉದ್ಯಾವರ ಪರಿಸರದ ವಿವಿಧೆಡೆ ಪ್ರತಿ ವರ್ಷ ಕಡಲ್ಕೊರೆತರ ಆಗುತ್ತಿದ್ದು, ಮೀನುಗಾರಿಕೆ ರಸ್ತೆ, ವಾಸದ ಮನೆ, ಜಮೀನು ಮತ್ತು ತೆಂಗಿನ ಮರಗಳಿಗೆ ಹಾನಿಯುಂಟಾಗುತ್ತಿದೆ. ಈ ಬಗ್ಗೆ ಎರಡು ಬಾರಿ ಪ್ರಸ್ತಾವನೆ ಸಲ್ಲಿಸಿದ್ದೇನೆ. ಮೂಳೂರಿಗೆ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮೀನುಗಾರಿಕೆ ಸಚಿವ ಮಂಕಾಳ ಎಸ್‌. ವೈದ್ಯ, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌  ಭೇಟಿ ನೀಡಿದ್ದರು. ಆದರೆ ಈವರೆಗೂ ಕಾಮಗಾರಿ ಆರಂಭಗೊಂಡಿಲ್ಲ ಎಂದು ಸರಕಾರದ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಅವರು, ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ತೆರಳಿ ಹಾನಿ ಪರಿಶೀಲಿಸಿದ್ದು,  ಅವಶ್ಯವಿರುವಲ್ಲಿ ತುರ್ತು ಕಾಮಗಾರಿ ನಡೆಸುವಂತೆ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಶಾಸಕರ ಪ್ರಸ್ತಾವನೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next