ಚಂಡೀಗಢ: ಡೇರಾ ಮಾಜಿ ಅಧಿಕಾರಿ ರಂಜಿತ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇಂದು ದೋಷಮುಕ್ತಗೊಳಿಸಿದೆ.
ಡೇರಾದ ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿದ್ದ ರಂಜಿತ್ ಸಿಂಗ್ ಅವರನ್ನು 2002 ರಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.
ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಹಾಗೂ ಇತರೆ ಐವರನ್ನು 2021 ರಲ್ಲಿ ಪಂಚಕುಲದ ಸಿಬಿಐ ನ್ಯಾಯಾಲಯ, ಅಪರಾಧಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ಹಾಗೂ 31 ಲಕ್ಷ ರೂಪಾಯಿ ದಂಡವನ್ನು ಪಾವತಿಸುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ರಾಮ್ ರಹೀಮ್ ಸಿಂಗ್ ಮತ್ತು ಇತರರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತ ತೀರ್ಪು ಇಂದು ಹೊರ ಬಿದ್ದಿದೆ. ಪಂಚಕುಲ ಸಿಬಿಐ ನ್ಯಾಯಾಲಯದ ಜೀವಾವಧಿ ಶಿಕ್ಷೆಯ ಆದೇಶವನ್ನು ತಳ್ಳಿ ಹಾಕಿರುವ ಹೈಕೋರ್ಟ್, ಗುರ್ಮೀತ್ ರಾಮ್ ರಹಿಂ ಸಿಂಗ್ ಮತ್ತು ಇತರ ಇವರನ್ನು ನಿರ್ದೋಷಿಗಳೆಂದು ಘೋಷಿಸಿ ತೀರ್ಪು ನೀಡಿದೆ.
ಆದರೆ ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ಸದ್ಯ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿದ್ದಾರೆ. ಅತ್ಯಾಚಾರ ಎಸಗಿದ ಆರೋಪಕ್ಕಾಗಿ ಪ್ರಸ್ತುತ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ: Violation of road rules: ಸದಾಶಿವನಗರಠಾಣೆ ವ್ಯಾಪ್ತಿಯಲ್ಲೇ 5 ತಿಂಗಳಲ್ಲಿ 1 ಲಕ್ಷ ಕೇಸ್!