Advertisement
ನಂತರ ಶ್ರೀಪಾದಂಗಳವರು ಶ್ರೀರಾಯರಿಗೆ ಹಸ್ತೋದಕ ಸಮರ್ಪಣೆ ಮಾಡಿದರು. ರಾಯರ ಮೂಲ ಬೃಂದಾವನಕ್ಕೆ ಪೀಠಾ ಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಎಲ್ಲ ಯತಿಗಳ ಬೃಂದಾವನಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಭಕ್ತರಿಗೆ ಗುಲಾಲು ಎರಚುವ ಮೂಲಕ ವಸಂತ್ಯುತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀಮಠದ ಪ್ರಾಧಿಕಾರದಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವದಲ್ಲಿ ಶ್ರೀ ಪ್ರಹ್ಲಾದರಾಜ ಉತ್ಸವ ಮೂರ್ತಿ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮಾಡಲಾಯಿತು.
ಆರಾಧನೆ ಪ್ರಯುಕ್ತ ಹಸಿರುಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ್ದರು. ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಾದ ಪಡೆದರು. ಅವರಿಂದ ಮಠದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಶ್ರೀಮಠ ಹಮ್ಮಿಕೊಂಡಿತ್ತು