Advertisement

ಟಾಯ್ಲೆಟ್ ನೊಳಗೆ 2ನೇ ತರಗತಿ ವಿದ್ಯಾರ್ಥಿಯ ಕತ್ತು ಸೀಳಿ ಬರ್ಬರ ಹತ್ಯೆ

04:09 PM Sep 08, 2017 | Team Udayavani |

ಗುರುಗ್ರಾಮ್: ಖಾಸಗಿ ಶಾಲೆಯ 2 ತರಗತಿ ವಿದ್ಯಾರ್ಥಿಯೊಬ್ಬನ ಶವ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿರುವ ಘಟನೆ ಗುರುಗ್ರಾಮ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಭೋಂಡ್ಸಿಯ ಸೋಹ್ನಾ ರಸ್ತೆಯಲ್ಲಿರುವ ರೇಯಾನ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಕಲಿಯುತ್ತಿರುವ 7 ವರ್ಷದ ವಿದ್ಯಾರ್ಥಿ ಪ್ರದ್ಯುಮನ್ ಠಾಕೂರ್ ಕತ್ತು ಸೀಳಿರುವ ಸ್ಥಿತಿಯಲ್ಲಿದ್ದ ಶವ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಶಾಲೆಯ ಸೂಪರ್ ವೈಸರ್ ಗಮನಿಸಿರುವುದಾಗಿ ವರದಿ ವಿವರಿಸಿದೆ.

ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಠಾಕೂರ್ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ವರದಿ ಹೇಳಿದೆ. ಘಟನೆ ನಡೆದ ಸ್ಥಳದಲ್ಲಿ ಚೂರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ತಂದೆ ಗುರುಗ್ರಾಮ್ ನಲ್ಲಿ ಓರಿಯಂಟ್ ಕ್ರಾಫ್ಟ್ ನಲ್ಲಿ ಕ್ವಾಲಿಟಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next