Advertisement

ಗುರುಮಠಕಲ್‌: 1962 ಪರೀಕ್ಷಾರ್ಥಿಗಳು

11:39 AM Jun 25, 2020 | Team Udayavani |

ಗುರುಮಠಕಲ್‌: ಗುರುಮಠಕಲ್‌ ತಾಲೂಕಿನಲ್ಲಿ 1,962 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದು, ಒಟ್ಟು 6 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಸ್ಯಾನಿಟೈಜ್‌ ಮತ್ತು ಮಾಸ್ಕ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಸಂಯೋಜಕ ಶಿವರಾಜ ಸಾಕಾ ತಿಳಿಸಿದರು.

Advertisement

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಗುರುಮಠಕಲ್‌ ತಾಲುಕಿನಲ್ಲಿ ಗಾಜರಕೋಟ, ಕಂದಕೂರ, ಮಾದ್ವಾರ್‌ದಲ್ಲಿ ತಲಾ 1 ಹಾಗೂ ಗುರುಮಠಕಲ್‌ನಲ್ಲಿ 3 ಕೇಂದ್ರ ಸೇರಿ ಒಟ್ಟು 6 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಪ್ರತಿ ಕೋಣೆಯಲ್ಲಿ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಥರ್ಮಲ್‌ ಸ್ಕ್ರೀನಿಂಗ್‌ ವೇಳೆ ವಿದ್ಯಾರ್ಥಿಗಳಲ್ಲಿ ನೆಗಡಿ, ಕೆಮ್ಮು, ಜ್ವರ ಲಕ್ಷಣ ಕಂಡುಬಂದಲ್ಲಿ ಪ್ರತಿ ಕೇಂದ್ರದಲ್ಲಿ ಪರೀಕ್ಷೆ ಬರೆಯಲು 1 ಪ್ರತ್ಯೇಕ ಕೊಠಡಿ ಕಾಯ್ದಿರಿಸಲಾಗಿದೆ. ನಿತ್ಯ ಪರೀಕ್ಷಾ ಕೊಠಡಿಗಳಿಗೆ ಸ್ಯಾನಿಟೈಜ್‌ ಮಾಡಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next