Advertisement

ಉಳ್ಳಾಲ: ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ

03:50 PM Jun 28, 2024 | Team Udayavani |

ಉಳ್ಳಾಲ: ಪ್ರಕೃತಿಯ ಜತೆ ಮನುಷ್ಯನಿಗೆ ಅವಿನಾಭಾವ ಸಂಬಂಧ ಇದೆ. ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯನ್ನು ಗುಣ ಪಡಿಸುವ ಔಷಧೀಯ ಗಿಡಗಳು ಪ್ರಕೃತಿಯಲ್ಲಿದ್ದು, ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಶೀನ ಶೆಟ್ಟಿ ಅವರು ಹೇಳಿದರು.

Advertisement

ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಘಟಕದ ವತಿಯಿಂದ ಜನಶಿಕ್ಷಣ ಟ್ರಸ್ಟ್‌ ಮುಡಿಪು, ಜನಜೀವನ ಬಾಳೆಪುಣಿ ಮತ್ತು ಚಿತ್ತಾರ ಬಳಗದ ಸಹಯೋಗದಲ್ಲಿ ಜನಶಿಕ್ಷಣ ಟ್ರಸ್ಟ್‌ನ ಸಭಾಂಗಣದಲ್ಲಿ ನಡೆದ ಹಸುರಾಗಿಸೋಣ ಪರಿಸರ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ಲಾಸ್ಟಿಕ್‌ ನಿರ್ಮೂಲನೆ ಮಾಡುವ ಮೂಲಕ ಸ್ವಚ್ಛ ಗ್ರಾಮದ ಪರಿಕಲ್ಪನೆ ಎಲ್ಲೆಡೆ ಸಾಕಾರಗೊಳ್ಳಬೇಕು ಎಂದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಡಾ| ಮೀನಾಕ್ಷಿ ರಾಮಚಂದ್ರ ಮಾತನಾಡಿ,
ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು. ಮುಂದಿನ ಪೀಳಿಗೆಯಲ್ಲಿ ಪರಿಸರ ಕಾಳಜಿ
ಹೆಚ್ಚಾಗಬೇಕು ಎಂದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್‌ ರೈ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಾಳೆಪುಣಿ ಅಧ್ಯಕ್ಷ ರಮೇಶ್‌ ಶೇಣವ ಅಧ್ಯಕ್ಷತೆ ವಹಿಸಿದ್ದರು. ಜನ ಶಿಕ್ಷಣ ಟ್ರಸ್ಟ್‌ ನ ತರಬೇತಿ ಕೇಂದ್ರದ ಶಿಕ್ಷಕಿ ಕಾವೇರಿ ಅವರನ್ನು ಸಮ್ಮಾನಿಸಲಾಯಿತು. ನರಿಂಗಾನ ಗ್ರಾಮ ಪಂಚಾಯತ್‌ ಅಧ್ಯಕ್ಷ ಮಹಮ್ಮದ್‌ ನವಾಝ್, ಇರಾ ಗ್ರಾಮ ಪಂಚಾಯತ್‌ ಅಧ್ಯಕ್ಷ ಎಂ.ಬಿ. ಉಮ್ಮರ್‌, ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ ಮೊದಲಾದವರು ಉಪಸ್ಥಿತರಿದ್ದರು. ಅಭಾಸಾಪ ಮಂಗಳೂರು ತಾಲೂಕು ಘಟಕದ ಉಪಾಧ್ಯಕ್ಷ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಚಂದ್ರಹಾಸ ಕಣಂತೂರು ಕಾರ್ಯಕ್ರಮ ರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next