Advertisement

ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ‌ ನಿಧನ

10:57 AM Apr 15, 2022 | Team Udayavani |

ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸಿಪಿಐಎಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿದ್ದ ಕಾಮ್ರೆಡ್ ಜಿ.ವಿ.ಶ್ರೀರಾಮರೆಡ್ಡಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Advertisement

ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದ ಅವರು ಇತ್ತೀಚೆಗೆ ಸಿಪಿಐಎಂ ಪಕ್ಷ ತೊರೆದು ತಮ್ಮದೆ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿದ್ದರು.

ಬೆಳಗ್ಗೆ 4 ಗಂಟೆಗೆ ಶ್ರೀರಾಮರೆಡ್ಡಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಿಸಲಾಯಿತು ಆದರೆ, ಚಿಕಿತ್ಸೆ ಫಲಿಸದೇ ಬೆಳಗ್ಗೆ 7.28ಕ್ಕೆ ಮೃತಪಟ್ಟಿರುವುದಾಗಿ ತಾಲೂಕು ವೈದ್ಯಾಧಿಕಾರಿಗಳು ಘೋಷಿಸಿದರು.

ಇದನ್ನೂ ಓದಿ:ರಾಜೀನಾಮೆ ನೀಡುವಂತೆ ಈಶ್ವರಪ್ಪ ಮೇಲೆ ಹೈಕಮಾಂಡ್ ಒತ್ತಡ ಹೇರಿಲ್ಲ: ಸಿಎಂ ಬೊಮ್ಮಾಯಿ

ಇತ್ತೀಚೆಗೆ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿದ್ದ ಅವರು ಸಾಮಾಜಿಕ ಹೋರಾಟ ಆರಂಭಿಸಿದ್ದರು. ಜಿ.ವಿ.ಎಸ್ ನಿಧನದಿಂದ ಅಪಾರ ಬೆಂಬಲಿಗರಲ್ಲಿ ದುಃಖ ಮಡುಗಟ್ಟಿದೆ. ಆಸ್ಪತ್ರೆ ಬಳಿ ಬೆಂಬಲಿಗರು ಜಮಾಯಿಸುತ್ತಿದ್ದಾರೆ

Advertisement

ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಅವರಣದಲ್ಲಿ ಮಾಜಿ ಶಾಸಕ  ಜಿ.ವಿ.ಶ್ರೀರಾಮರೆಡ್ಡಿರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.

Koo App

ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಕಾಮ್ರೇಡ್‌ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ. ಸಿಪಿಎಂ (ಐ) ಪಕ್ಷದಿಂದ ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು.ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.

H D Kumaraswamy (@h_d_kumaraswamy) 15 Apr 2022

Advertisement

Udayavani is now on Telegram. Click here to join our channel and stay updated with the latest news.

Next