ಬೆಂಗಳೂರು : ಕೊಡಗು ಜಿಲ್ಲೆಯ ಮಾಜಿ ಸಚಿವ ಬಿ.ಎ.ಜೀವಿಜಯ ಹಾಗೂ ಅವರ ಬೆಂಬಲಿಗರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಅವರು ದೇಶದಲ್ಲಿ ಜಾತ್ಯಾತೀತ ತತ್ವಗಳಿಗೆ ತೊಂದರೆ ಆಗ್ತಿದೆ..ನಿನ್ನೆ ಜೆಡಿಎಸ್ ಪಕ್ಷದ ನಿಲುವು ನೋಡಿ ನನಗೆ ರಾತ್ರಿ ನಿದ್ದೆ ಬರಲಿಲ್ಲ. ಜಾತ್ಯಾತೀತ ಅಂತ ಹೇಳಿಕೊಳ್ಳುವ ಪಕ್ಷದ ನಡೆ ನೋಡಿ ನನಗೆ ತೀವ್ರ ಬೇಸರವಾಗಿದೆ ಎಂದು ಭೂ ಸುಧಾರಣಾ ಕಾಯ್ದೆ ಪಾಸ್ ಮಾಡಲು ಬಿಜೆಪಿಗೆ ಸಹಕರಿಸಿದ ಜೆಡಿಎಸ್ ವಿರುದ್ಧ ಟೀಕಿಸಿದರು.
ಇದನ್ನೂ ಓದಿ:ಕೋವಿಡ್ 19 ಸೋಂಕಿತರ ಮನೆ ಹೊರಗೆ ಪೋಸ್ಟರ್ ಅಂಟಿಸುವಂತಿಲ್ಲ: ಸುಪ್ರೀಂಕೋರ್ಟ್
ಮಡಕೇರಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಅಸಮಾಧಾನ : ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರು ನನ್ನ ಹೆಸರನ್ನು ಹೇಳಲಿಲ್ಲ ಎಂದು ಮಡಿಕೇರಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜಾರಾಮ್ ಅಸಮಾಧಾನ ವ್ಯಕ್ತಪಡಿಸಿದ್ದು ಉಳಿದ ನಾಯಕರು ನಿಮ್ಮ ಹೆಸರನ್ನು ಹೇಳಿದ್ದಾರೆ ಎಂದು ಸಮಾಧಾನ ಪಡಿಸಿದ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಜಮೀರ್ ಅಹ್ಮದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.