Advertisement

Gyanvapi Case: ಇಂದು ಹೈಕೋರ್ಟ್‌ ತೀರ್ಪು

12:46 AM Feb 26, 2024 | Team Udayavani |

ಲಕ್ನೋ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ವ್ಯಾಸ್‌ ತೆಹಖಾನಾದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸೋಮವಾರ ಅಲಹಾಬಾದ್‌ ಹೈಕೋರ್ಟ್‌ ಪ್ರಕಟಿಸಲಿದೆ.

Advertisement

ಮಸೀದಿಯ ಕೆಳ ಅಂತಸ್ತಿನಲ್ಲಿ ಬರೋಬ್ಬರಿ 31 ವರ್ಷಗಳ ಬಳಿಕ ಹಿಂದೂಗಳಿಗೆ ಪೂಜೆ ಸಲ್ಲಿಸಲು ವಾರಾಣಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿತ್ತು. ಅದರಂತೆ ಪ್ರಸಕ್ತ ತಿಂಗಳ ಆರಂಭದಲ್ಲಿ ಅಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದ್ದವು. ಇದಾದ ಬಳಿಕ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಂಜುಮಾನ್‌ ಇಂತೆಜಾಮಿಯಾ ಮಸೀದಿ ಸಮಿತಿಯು ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದರ ತೀರ್ಪು ಸೋಮವಾರ ಪ್ರಕಟಗೊಳ್ಳಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next