ನವದೆಹಲಿ: ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ (ಮೇ 19) ಮಧ್ಯಾಹ್ನ 3ಗಂಟೆಗೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದ್ದು, ಮತ್ತೊಂದೆಡೆ ವಾರಾಣಸಿ ಕೋರ್ಟ್ ಶುಕ್ರವಾರದವರೆಗೆ ಜ್ಞಾನವಾಪಿ ಮಸೀದಿ ಕುರಿತ ಅರ್ಜಿಯ ವಿಚಾರಣೆ ನಡೆಸಬಾರದು ಎಂದು ನಿರ್ದೇಶನ ನೀಡಿದೆ.
ಇದನ್ನೂ ಓದಿ:ಕಾಪು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಮೂರು ಕಾರುಗಳು ಜಖಂ
ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಾಳೆ ತ್ರಿಸದಸ್ಯ ಪೀಠದಲ್ಲಿ ನಡೆಯಲಿದ್ದು, ಏತನ್ಮಧ್ಯೆ ವಾರಾಣಸಿ ವಿಚಾರಣಾ ನ್ಯಾಯಾಲಯ ಯಾವುದೇ ಆದೇಶವನ್ನಾಗಲಿ, ವಿಚಾರಣೆಯನ್ನಾಗಲಿ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವುದಾಗಿ ವರದಿ ವಿವರಿಸಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣದ ವರದಿಯನ್ನು ಗುರುವಾರ ವಾರಾಣಸಿ ಕೋರ್ಟ್ ಗೆ ಸಲ್ಲಿಸಲಾಗಿತ್ತು. ಅಲ್ಲದೇ ಜ್ಞಾನವಾಪಿ ಮಸೀದಿಯ ವಿಡಿಯೋ ಚಿತ್ರೀಕರಣಕ್ಕೆ ತಡೆ ನೀಡಬೇಕೆಂದು ಕೋರಿ ಮಸೀದಿ ಆಡಳಿತ ಮಂಡಳಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ವಾರಾಣಸಿ ಕೋರ್ಟ್ ಯಾವುದೇ ಪ್ರಕ್ರಿಯೆ ನಡೆಸದಂತೆ ತಡೆ ನೀಡಿರುವುದಾಗಿ ವರದಿ ತಿಳಿಸಿದೆ.