ವಾರಾಣಸಿ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಅರ್ಜಿಯನ್ನು ಮೊದಲು ವಿಚಾರಣೆ ಮಾಡಬೇಕು ಎಂಬ ಬಗ್ಗೆ ಜಿಲ್ಲಾ ಕೋರ್ಟ್ ಮಂಗಳವಾರ ತೀರ್ಮಾನ ಪ್ರಕಟಿಸಲಿದೆ.
ಜಿಲ್ಲಾ ಕೋರ್ಟ್‌ನ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಎರಡು ಪಂಗಡಗಳ ಪರ ವಕೀಲರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಬಳಿಕ, ತೀರ್ಮಾನವನ್ನು ಕಾಯ್ದಿರಿಸುವುದಾಗಿ ಪ್ರಕಟಿಸಿದ್ದಾರೆ. ಜತೆಗೆ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಿದ್ದಾರೆ.
ಇದೇ ವೇಳೆ, ಜ್ಞಾನವಾಪಿ ಮಸೀದಿಯ ಒಳಭಾಗದಲ್ಲಿ ಕಂಡುಬಂದಿದೆ ಎಂದು ಹೇಳಲಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಹೊಸತಾಗಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು.
ಇದನ್ನೂ ಓದಿ:ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಮಾತನಾಡುವುದು ಸಿದ್ದರಾಮಯ್ಯ ಚಟ: ಛಲವಾದಿ ನಾರಾಯಣಸ್ವಾಮಿ
ಜಿಲ್ಲಾ ಕೋರ್ಟ್‌ನ ನ್ಯಾಯಾಧೀಶರು ಸಿವಿಲ್ ಜಡ್ಜ್ (ಹಿರಿಯ ಶ್ರೇಣಿ) ನ್ಯಾಯಾಧೀಶರ ಕೋರ್ಟ್‌ನಿಂದ ವರ್ಗಾವಣೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಜಿಲ್ಲಾ ಕೋರ್ಟ್‌ನಲ್ಲಿಯೇ ವಿಚಾರಣೆ ನಡೆಯಬೇಕು ಎಂದು ಆದೇಶ ನೀಡಿತ್ತು.