ಪ್ರಯಾಗ್‌ರಾಜ್: ಜ್ಞಾನವಾಪಿ ಮಸೀದಿಯಲ್ಲಿ ಇರುವ ಶಿವಲಿಂಗ ಬಗ್ಗೆ ಕಾರ್ಬನ್ ಡೇಟಿಂಗ್ ನಡೆಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೇಲ್ಮವಿ ಅರ್ಜಿಯ ವಿಚಾರಣೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ನ.30ಕ್ಕೆ ನಡೆಯಲಿದೆ.
Advertisement
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆ ಸಮಯ ವಿಸ್ತರಣೆ ನೀಡಿ ಸಲ್ಲಿಸಿದ ಕೋರಿಕೆಯ ಪ್ರತಿಯನ್ನು ನೀಡಿದ್ದಾರೆ. ಮಸೀದಿ ಪರ ವಕೀಲರೂ ಕೂಡ ತಮ್ಮ ಕಕ್ಷಿದಾರರ ಪರ ವಾದ ಮಂಡಿಸಲು ಆ ವೇಳೆಗೆ ಸಿದ್ಧತೆ ನಡೆಸಿದ್ದಾರೆ. ವಾರಾಣಸಿಯಲ್ಲಿ ಇರುವ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕಾರ್ಬನ್ ಡೇಟಿಂಗ್ ನಡೆಸಬೇಕು ಎಂಬ ಅರ್ಜಿಯನ್ನು ತಿರಸ್ಕರಿಸಿದ್ದರು.