ಪ್ರಯಾಗ್‌ರಾಜ್:ವಾರಾಣಸಿಯಲ್ಲಿ ಇರುವ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಹಂತದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಡಿ.5ರಂದು ಮುಂದಿನ ವಿಚಾರಣೆ ನಡೆಸಲಿದೆ.
Advertisement
ಮಸೀದಿ ಆವರಣದಲ್ಲಿ ಇರುವ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವುದರ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿ ಇದಾಗಿದೆ. ಮಂಗಳವಾರ ಅಲ್ಪಕಾಲದ ವಿಚಾರಣೆ ಬಳಿಕ ಪ್ರಕರಣವನ್ನು ಬುಧವಾರಕ್ಕೆ ಮುಂದೂಡಿತ್ತು.