Advertisement
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರ, ರಾಜ್ಯದಲ್ಲಿ ಸಂವಿಧಾನ ವಿರೋಧಿ ಸರ್ಕಾರ ರಚಿಸಿದ್ದರಿಂದ ಜನಪರ ಕಾರ್ಯಕ್ರಮ ನೀಡಲು ಸಾಧ್ಯವಾಗುತ್ತಿಲ್ಲ. ಜನಾದೇಶವೇ ಇಲ್ಲದ ಬಿಜೆಪಿ ಹಣಬಲ, ಜಾತಿಬಲ, ತೋಳ್ಬಲದಂಥ ಅಸ್ತ್ರಗಳನ್ನು ಬಳಸಿಕೊಂಡು ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನೇ ಕಳೆದಿದೆ ಎಂದು ಕುಟುಕಿದರು.
Related Articles
Advertisement
ಸಾಂಕ್ರಾಮಿಕ ರೋಗ ತಜ್ಞರ ಸಲಹೆ, ಅಧ್ಯಯನ ಪಡೆಯದೇ ಅವೈಜ್ಞಾನಿಕ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂಬಂಥ ಕರೆಗಳ ಮೂಲಕ ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಸ್ಥಿತಿ ಗಂಭೀರ ಪರಿಣಾಮ ಬೀರಲು ಕಾರಣವಾಯಿತು ಎಂದು ದೂರಿದರು.
ಕೋವಿಡ್ ಲಾಕಡೌನ್, ಸೀಲಡೌನ್ ಹೆಸರಿನಲ್ಲಿ ಬಡವರು, ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದರು. ಎರಡನೇ ಅಲೆಯ ಸಿದ್ಧತೆಯಲ್ಲೂ ವಿಫಲವಾಗಿದ್ದರಿಂದ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿ ವರ್ತನೆಯಿಂದ ದೇಶದಲ್ಲಿ ಜನತೆ ಆರ್ಥಿಕ ಸಂಕಷ್ಟ ಅನುಭವಿಸುವಂತೆ ಆಯ್ತು ಎಂದು ಟೀಕಿಸಿದರು. ಕೋವಿಡ್ ಸಂಭವನೀಯ ಮೂರನೇ ಅಲೆಯ ಬಗ್ಗೆ ಸರ್ಕಾರ ಇನ್ನಾದರೂ ಗಂಭೀರ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣದಂಥ ಅವೈಜ್ಞಾನಿಕ ನಿರ್ಧಾರದಿಂದ ದೇಶದಲ್ಲಿ ಜನಸಾಮಾನ್ಯರ ಕೊಳ್ಳುವ ಶಕ್ತಿಯೇ ಇಲ್ಲವಾಯಿತು. ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ವ್ಯಕ್ತಿಯ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ನೀಡುವ ಭರವಸೆ ಹುಸಿಯಾಗಿದೆ ಎಂದು ದೂರಿದರು.
ರಾಜ್ಯದಲ್ಲಿ ದೇವರಾಜ ಅರಸು ಸರ್ಕಾರ ಕರ್ನಾಟಕದಲ್ಲಿ ಉಳುವವನೇ ಒಡೆಯ ಕಾನೂನು ಜಾರಿಗೆ ತಂದ ದೇಶದ ಮೊದಲ ರಾಜ್ಯ. ಆದರೆ ದೇಶದ ಜನ ಕೋವಿಡ್ ಲಾಕ್ ಡೌನ್ ಸಂಕಷ್ಟದಲ್ಲಿ ಇದ್ದಾಗ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿಕೊಂಡು ಹಣವಂತರು ಬೇಕಾಬಿಟ್ಟಿಯಾಗಿ ರೈತರ ಜಮೀನು ಕೊಳ್ಳುವ ಕಾನೂನು ತಿದ್ದುಪಡಿ ಮಾಡಿದೆ. ಇದರೊಂದಿಗೆ ದೇಶದಲ್ಲಿ ಕೃಷಿಯ ಬೆನ್ನೆಲುಬು ಮುರಿಯುವ ಕೆಲಸ ಮಾಡಿದ್ದಾರೆ. ಇಂಥ ಕ್ರಮಗಳನ್ನೇ ಇವರು ಪ್ರಜಾಪ್ರಭುತ್ವ ನಡೆ ಎಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚಂದ್ರಶೇಖರ ಕೊಡಬಾಗಿ, ಸುನಿಲ ಉಕ್ಕಲಿ, ಅಡಿವೆಪ್ಪ ಸಾಲಗಲ್, ನಾಗರಾಜ ಲಂಬು, ಸುರೇಶ ಘೊಣಸಗಿ, ರಾಜು ಆಲಗೂರ, ಸಂಗಪ್ಪ ಚಲವಾದಿ, ಬಸವರಾಜ ಬಾದಾಮಿ ಇತರರು ಉಪಸ್ಥಿತರಿದ್ದರು.