Advertisement

ರೈತ ಹೋರಾಟ ಬೆಂಬಲಿಸಿ ಜಂಟಿ ಅಧಿವೇಶನದ ರಾಷ್ಟ್ರಪತಿ ಭಾಷಣಕ್ಕೆ ಬಹಿಷ್ಕಾರ: ಎಚ್ ಡಿ ದೇವೇಗೌಡ

10:20 AM Jan 29, 2021 | Team Udayavani |

ಬೆಂಗಳೂರು/ ಹೊಸದಿಲ್ಲಿ: ಕೃಷಿ ವಿಧೇಯಕಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಇಂದು ಜಂಟಿ ಅಧಿವೇಶನದಲ್ಲಿ ನಡೆಯುವ ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ನಿರ್ಧರಿಸಿದ್ದಾರೆ.

Advertisement

ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ನಿರ್ಧರಿಸಿದೆ. ರಾಜ್ಯ ಸಭಾ ಸದಸ್ಯರಾಗಿರುವ ದೇವೇಗೌಡ ಅವರು ಕೂಡಾ ಇದೇ ತೀರ್ಮಾನ ಕೈಗೊಂಡಿದ್ದಾರೆ.

ಇದನ್ನೂ ಓದಿ:ಸಂಸತ್‌ ಅಧಿವೇಶನ ಇಂದು ಶುರು: ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ನನ್ನ ರೈತ ಸಹೋದರರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಸಂಸತ್ ನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಬಲವಂತವಾಗಿ ಅಂಗೀಕರಿಸಲಾಗಿತ್ತು. ಜ.26ರಂದು ನಡೆದ ಘಟನೆಯಲ್ಲಿ ಕೇಂದ್ರ ಸರ್ಕಾರದ ಕೈವಾಡವಿರುವ ಬಗ್ಗೆ ತನಿಖೆಯಾಗಬೇಕು ಎಂದು ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

Advertisement

ಕಳೆದ ವರ್ಷವೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಪಕ್ಷಗಳು ರಾಷ್ಟ್ರಪತಿ ಭಾಷಣದಿಂದ ದೂರ ಉಳಿದಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next