Advertisement

H.D. Devegowda ಕುಟುಂಬಕ್ಕೆ ಎಷ್ಟು ಸೈಟ್‌ ಹೋಗಿದೆ ಗೊತ್ತಾ?: ಸಿದ್ದರಾಮಯ್ಯ

11:11 PM Jul 29, 2024 | Team Udayavani |

ಮೈಸೂರು: ಮುಡಾದಿಂದ ಯಾವುದೇ ಸೈಟ್‌ ಪಡೆದಿಲ್ಲ ಎಂದು ರವಿವಾರ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಎಷ್ಟು ಸೈಟ್‌ ಹೋಗಿದೆ ಗೊತ್ತಿದೆಯಾ? ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟ್‌ ಬರೆಸಿಕೊಂಡಿದ್ದಾರೆ ಪಟ್ಟಿ ಕೊಡಲೇ? ಎಂದು ಪ್ರಶ್ನಿಸಿದರು.

Advertisement

ಕುಮಾರಸ್ವಾಮಿ 40 ವರ್ಷದ ಹಿಂದೆ ಮುಡಾ ಸೈಟ್‌ ಪಡೆದಿದ್ದಾರೆ. ಅದರ ಸ್ವಾಧೀನ ಪತ್ರವೂ ಪಡೆದುಕೊಂಡಿದ್ದಾರೆ. ಈಗ ಇಲ್ಲ ಎಂದು ಸುಳ್ಳು ಹೇಳಿದರೆ ಹೇಗೆ? ಇವರೆಲ್ಲ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next