Advertisement
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಬ್ಬರಿಗೂ ಮುಖ್ಯಮಂತ್ರಿ ಆಗುವ ಹುಚ್ಚು. ಇಬ್ಬರಿಗೂ ಓಟು ಪಡೆಯುವ ಹುಚ್ಚು ಹತ್ತಿಕೊಂಡಿದೆ. ಸಮಾಜಕ್ಕೆ ಒಳ್ಳೆಯದಾಗಲಿ ಅನ್ನುವುದು ಅವರಿಗಿಲ್ಲ. ಬಿಜೆಪಿಯವರಿಗೆ ಕೂಡ ಮತ ಪಡೆಯುವ ಹುಚ್ಚು ಬಂದಿದೆ ಎಂದರು.
Related Articles
ಮಹದಾಯಿ ನದಿ ನೀರಿನ ವಿವಾದದ ಬಗ್ಗೆ ಕಾಂಗ್ರೆಸ್ ಎರಡು ನಾಲಿಗೆ ನೀತಿ ಅನುಸರಿಸುತ್ತಿವೆ. ಮಹದಾಯಿ ಬಗ್ಗೆ ಆ ಪಕ್ಷದ ಸತೀಶ್ ಜಾರಕಿಹೊಳಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ನಿನ್ನೆ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿದ ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ನೀರನ್ನು ಗೋವಾದಿಂದ ಬಿಟ್ಟು ಕೊಡಲ್ಲ ಅಂತ ಹೇಳಿಕೊಂಡಿದಾರೆ. ಇದು ಅವರ ದ್ವಿಮುಖ ನೀತಿ ತೋರಿಸುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
Advertisement
ಕಾಂಗ್ರೆಸ್ ತೊರೆದಿರುವ ಸಿಎಂ ಇಬ್ರಾಹಿಂ ಅವರು ಒಳ್ಳೆಯ ನಿರ್ಧಾರವನ್ನು ಕೈಗೊಳ್ಳಲಿ¨ªಾರೆ. ಇಬ್ರಾಹಿಂ ಮೊದಲಿನಿಂದಲೂ ಜೆಡಿಎಸ್ ಜತೆ ಗುರುತಿಸಿಕೊಂಡವರು. ನಡುವೆ ಕೆಲ ವ್ಯತ್ಯಾಸಗಳು ಆಗಿದ್ದವು. ಈಗ ಮತ್ತೆ ಜೆಡಿಎಸ್ ಜತೆ ಸೇರಿ ಮತ್ತೂಂದು ರಂಗ ರಚನೆ ಬಗ್ಗೆ ಅವರು ಮುಂದಾದರೆ ಸ್ವಾಗತ ಮಾಡುವೆ.’– ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ.