Advertisement

ಆಯುಷ್‌ ಅಧಿಕಾರಿ ಹಿಂದಿ ಹೇಳಿಕೆ: ಕುಮಾರಸ್ವಾಮಿ ಆಕ್ರೋಶ

10:02 AM Aug 24, 2020 | Hari Prasad |

ಬೆಂಗಳೂರು: ಆಯುಷ್‌ ಇಲಾಖೆ ಕಾರ್ಯಕ್ರಮದಲ್ಲಿ ಅಧಿಕಾರಿಯೊಬ್ಬರು ಹಿಂದಿ ಬಾರದವರು ಹೊರಗೆ ಹೋಗಿ ಎಂದು ಹೇಳಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಆಯುಷ್‌ ಇಲಾಖೆ ಆಯೋಜಿಸಿದ್ದ ವರ್ಚುವಲ್‌ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು ಎಂದು ಹೇಳಿರುವುದನ್ನು ಕುಮಾರಸ್ವಾಮಿ ಖಂಡಿಸಿದ್ದಾರೆ.

‘ಸಂವಿಧಾನಬದ್ಧ ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯವಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸಹಿತ ಇತರ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ವಿರುದ್ಧ ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next