Advertisement

H.D.Kumaraswamy ಕಡತ ರಾಜ್ಯಪಾಲರ ಬಳಿಯೇ ಇದೆ: ಡಾ.ಜಿ.ಪರಮೇಶ್ವರ್‌

01:28 AM Sep 02, 2024 | Team Udayavani |

ಬೆಂಗಳೂರು: ಕಡತಗಳು ರಾಜಭವನದಿಂದ ಸ್ಪಷ್ಟೀಕರಣಕ್ಕಾಗಿ ಲೋಕಾಯುಕ್ತರಿಗೆ ಹೋಗಿವೆಯೇ ಹೊರತು ಅದು ತಿರಸ್ಕೃತಗೊಂಡಿಲ್ಲ. ಹಾಗಾಗಿ ಆ ಕಡತಗಳು ರಾಜ್ಯಪಾಲರ ಬಳಿಯೇ ಇದ್ದಂತಾಯಿತು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ಅನಂತರ, ಸ್ಪಷ್ಟೀಕರಣ ಕೇಳಿ 3 ದೂರುಗಳನ್ನು ವಾಪಸ್‌ ಕಳುಹಿಸಿದ್ದೇವೆ ಎಂದು ರಾಜ್ಯಪಾಲರು ಹೇಳುತ್ತಿದ್ದಾರೆ. ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರಿಜೆಕ್ಟ್‌  ಆಗುವುದಿಲ್ಲ. ರಾಜ್ಯಪಾಲರ ಬಳಿ ಇದ್ದಂತೆ ಅಲ್ಲವೇ? ಇದನ್ನೇ ರಾಜ್ಯಪಾಲರು ನನ್ನ ಬಳಿ ದೂರುಗಳು ಬಾಕಿ ಇಲ್ಲ ಅಂತ ಹೇಳುತ್ತಿದ್ದಾರೆ. ಲೋಕಾಯುಕ್ತದವರು ಸುಮ್ಮನೆ ಕೂರುವುದಿಲ್ಲ. ಸ್ಪಷ್ಟೀಕರಣ ನೀಡಬೇಕಾಗುತ್ತದೆ. ತದನಂತರದ ವಿಚಾರ ರಾಜ್ಯಪಾಲರಿಗೆ ಬಿಟ್ಟಿದ್ದು ಎಂದು ಸೂಚ್ಯವಾಗಿ ಹೇಳಿದರು.

ಈ ನಡುವೆ ರಾಜ್ಯಪಾಲರು ಒಂದು ದಿನದ ಹಿಂದಷ್ಟೇ ತಮ್ಮ ಬಳಿ ಒಂದು ಕಡತ ಮಾತ್ರ ಇದೆ ಅಂತ ತಿಳಿಸಿದ್ದರು. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಯವರದ್ದು ಎಂಬುದು ಗೊತ್ತಾಗಿದೆ. ಅದಕ್ಕಾದರೂ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಕಾನೂನು ರೀತಿ ಇದೆಯೇ? ಕಾನೂನು ಬಾಹಿರವಾಗಿದೆಯೇ ಎಂಬುದನ್ನು ಲೋಕಾಯುಕ್ತದವರು ತಿಳಿಸಿದ್ದಾರೆ. ಅದನ್ನು ಆಧರಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಮುಡಾ ವಿಚಾರದಿಂದ ಮುಖ್ಯಮಂತ್ರಿ ಆತಂಕಗೊಂಡಿದ್ದಾರಾ  ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಆತಂಕದಲಿಲ್ಲ. ಎಲ್ಲ ವಿಚಾರದಲ್ಲೂ ಸ್ಪಷ್ಟವಾಗಿದ್ದಾರೆ. ವಿಪಕ್ಷದ ನಾಯಕನಾಗಿ, ಮುಖ್ಯಮಂತ್ರಿಯಾಗಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ. ಯಾವುದೇ ರೀತಿಯ ಕಾನೂನು ಬಾಹಿರ ಕೆಲಸಗಳನ್ನೂ ಮಾಡಿಲ್ಲ ಎಂಬುದನ್ನು ರಾಜ್ಯದ ಜನತೆಯ ಮುಂದೆ ಸ್ಪಷ್ಟಪಡಿಸಿದ್ದಾರೆ ಎಂದರು.

ರಾಷ್ಟ್ರಪತಿ ಭೇಟಿಗೆ ತೀರ್ಮಾನ
ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ನಿವೇಶನದ ಬಗ್ಗೆ ರಾಜ್ಯಪಾಲರ ಬಳಿ ಚರ್ಚೆ ಆಗಿಲ್ಲ. ವಿಶೇಷ ಅಧಿವೇಶನ ಕರೆಯುವ ಬಗ್ಗೆ ಮುಖ್ಯಮಂತ್ರಿಯವರ ಬಳಿ ಪ್ರಸ್ತಾಪ ಆಗಿಲ್ಲ ಎಂದ ಡಾ| ಪರಮೇಶ್ವರ್‌, ಕೋರ್ಟ್‌ ತೀರ್ಪು ಆಧರಿಸಿ, ಮುಂದಿನ ಬೆಳವಣಿಗೆಗಳನ್ನು ನೋಡಿ ರಾಷ್ಟ್ರಪತಿ ಭೇಟಿಯ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement

ಕುನ್ಹಾ ವರದಿ ಸಂಪುಟದ ಮುಂದೆ ಬಂದರೆ ಚರ್ಚೆ
ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ’ ಕುನ್ಹಾ ಅವರು ಮುಖ್ಯಮಂತ್ರಿಗೆ ವರದಿ ಸಲ್ಲಿಸುವಾಗ ನಾನು ಇರಲಿಲ್ಲ. ಅದನ್ನು ಪರಿಶೀಲಿಸಿ, ಏನು ಶಿಫಾರಸು ಮಾಡಿದ್ದಾರೆ ಎಂಬುದನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದಾದರೂ ವಿಷಯದ ಕುರಿತು ಸತ್ಯಾಸತ್ಯತೆಗಳನ್ನು ಸರಕಾರಕ್ಕೆ ತಿಳಿಸಬೇಕು ಎಂಬ ಉದ್ದೇಶ ಇಟ್ಟುಕೊಂಡು ಆಯೋಗಗಳನ್ನು ರಚಿಸಲಾಗಿರುತ್ತದೆ.

ಆಯೋಗದ ವರದಿ ಬಂದಾದ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಇಲ್ಲವಾದರೆ ಆಯೋಗ ಏಕೆ ರಚಿಸಬೇಕು. ಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ವರದಿ ಸಂಪುಟದ ಮುಂದೆ ಬಂದರೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.