Advertisement
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ವಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದವರು ಹೇಳಿದ್ದಾ ರೆ.
ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್ ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.