Advertisement

ಸಚಿವ ಜಗದೀಶ್ ಶೆಟ್ಟರ್ ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

02:38 PM Oct 03, 2020 | keerthan |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಹಟ್ನಾ, ಗೊಲ್ಲರಹಟ್ಟಿ ಸುತ್ತಮುತ್ತಲ ಗ್ರಾಮ ಗಳ  ರೈತರ ಜಮೀನು ಸ್ವಾಧೀನ ಸಂಬಂಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

Advertisement

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹಟ್ನಾ, ಗೊಲ್ಲರಹಟ್ಟಿ ಸುತ್ತಮುತ್ತಲ ಗ್ರಾಮಗಳ ರೈತರ ಜಮೀನು ಸ್ವಾಧೀನ ಸಂಬಂಧ ಉಂಟಾಗಿದ್ದ ಸಮಸ್ಯೆಗಳ ಕುರಿತು ಎಚ್ ಡಿ ಕುಮಾರಸ್ವಾಮಿಯವರು ಸಚಿವ ಜಗದೀಶ್ ಶೆಟ್ಟರ್ ಮತ್ತು ಕೆಐಎಡಿಬಿ  ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಇದನ್ನೂ ಓದಿ:ಮಿನಿಫೈಟ್: ಶಿರಾ ಬಿಜೆಪಿ ಅಭ್ಯರ್ಥಿ ಬಹುತೇಕ ಅಂತಿಮ, ರಾಜೇಶ್ ಗೌಡ ಇಂದು ಬಿಜೆಪಿ ಸೇರ್ಪಡೆ

500 ಎಕರೆ ಒಣಭೂಮಿ ಪ್ರದೇಶವನ್ನು ಸ್ವಾಧೀನ ಪಡಿಸಿಕೊಂಡು ರೈತರಿಗೆ ಅನ್ಯಾಯವಾಗದಂತೆ ಸೂಕ್ತ ಪರಿಹಾರ ನೀಡಬೇಕು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 700ಕ್ಕೂ ಹೆಚ್ಚು ಎಕರೆ ನೀರಾವರಿ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡುವಂತೆ ಒತ್ತಾಯಿಸಿ ಅಗತ್ಯ  ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next