Advertisement

H. D. Kumaraswamy”ದೇವದಾರಿ ಗಣಿ ಬಗ್ಗೆ ತಪ್ಪು ಮಾಹಿತಿ’

11:32 PM Jun 28, 2024 | Team Udayavani |

ಬೆಂಗಳೂರು: ದೇವದಾರಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ಧ ಕೆಟ್ಟ ಅಭಿಪ್ರಾಯ ಉಂಟು ಮಾಡಲು ಸಂಚು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Advertisement

ಶುಕ್ರವಾರ ದಿಲ್ಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯಕ್ಕೆ 2,800 ಕೋಟಿ ರೂ.ಗೂ ಹೆಚ್ಚು ಆದಾಯ ತಂದುಕೊಡುವ ಹಾಗೂ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಕಾರಣವಾಗುವ ಈ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವದಾರಿ ಗಣಿಗಾರಿಕೆಗೆ ನಾನು ಹೊಸದಾಗಿ ಒಪ್ಪಿಗೆ ನೀಡಿಲ್ಲ. ರಾಜ್ಯ ಸರಕಾರವೇ ಇದಕ್ಕೆ ಅನುಮತಿ ಕೊಟ್ಟಿದೆ. ಹಣಕಾಸು ನೆರವು ಪಡೆಯುವ ವಿಚಾರದಲ್ಲಿ ಯೋಜನೆಯ ಕಡತವನ್ನು ಆರ್ಥಿಕ ಇಲಾಖೆಗೆ ಕಳುಹಿಸಬೇಕಿತ್ತು. ಅದನ್ನು ನಾನು ಮಾಡಿದ್ದೇನೆ. ಕುದುರೆಮುಖ ಪ್ರದೇಶದಲ್ಲಿ ಕೆಐಒಸಿಎಲ್‌ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರೆ ಕ್ರಮ ಜರಗಿಸಬಹುದು ಹಾಗೂ ದಂಡವನ್ನು ಹಾಕಬಹುದು. ಅದನ್ನು ಬಿಟ್ಟು ಸರಕಾರಿ ಸ್ವಾಮ್ಯದ ಕಂಪೆನಿಯೊಂದರ ಯೋಜನೆಗೆ ಅಡ್ಡಗಾಲು ಹಾಕಿದರೆ ಅದು ಮತ್ತಷ್ಟು ನಷ್ಟಕ್ಕೆ ತುತ್ತಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next