Advertisement

ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು, ಹಿಂಸೆಯಿಂದಲ್ಲ: ದೀದಿ ಬೆಂಬಲಕ್ಕೆ ಎಚ್ಡಿಕೆ

02:37 PM Mar 11, 2021 | Team Udayavani |

ಬೆಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ. ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ಖಂಡಿಸಿ ಟ್ವೀಟ್ ಮಾಡಿರುವ ಅವರು, ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಪಶ್ಚಿಮಬಂಗಾಳ ಚುನಾವಣಾ ಪ್ರಚಾರ: ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಕಮಾಂಡೋ ಭದ್ರತೆ

ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಅವರು ಗೆಲ್ಲುತ್ತಾರೆ ಕೂಡ.  ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಎಚ್ ಡಿಕೆ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ : ಮಮತಾ ಮೇಲೆ ನಡೆದಿದ್ದು ದಾಳಿಯೇ.? ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು..?

Advertisement
Advertisement

Udayavani is now on Telegram. Click here to join our channel and stay updated with the latest news.

Next