Advertisement

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

02:53 PM Apr 24, 2021 | Team Udayavani |

ಬೆಂಗಳೂರು: ಕೋವಿಡ್  ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

Advertisement

ಬಳಿಕ ಟ್ವೀಟ್ ಮಾಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಜೀವವಾಯುವಿಗೆ ಹಾಹಾಕಾರ:ಆಕ್ಸಿಜನ್ ಕೊರತೆಯಿಂದ ಅಮೃತಸರದಲ್ಲಿ 6 ಜನ ದುರ್ಮರಣ       

ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next