ಬೆಂಗಳೂರು: ‘ಅಭಿಮಾನಿಗಳೇ ದೇವರು’ ಎಂದು ಬಣ್ಣಿಸಿದ ವರನಟ ಡಾ. ರಾಜಕುಮಾರ್ ಅವರ ಜನುಮ ದಿನ ಇಂದು. ಅವರ ನೆನಪು ಎಂದೆಂದಿಗೂ ಅಮರ. ನಾಡುನುಡಿಯ ಬಗ್ಗೆ ಅವರ ನಿಲುವು ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ವರನಟ ಡಾ. ರಾಜ್ ಕುಮಾರ್ ಅವರನ್ನು ನನೆದರು. ರಾಜ್ ಕುಮಾರ್ ಅವರು ಕನ್ನಡದ ಅಸ್ಮಿತೆ ಮತ್ತು ಆದರ್ಶವಾಗಿದ್ದರು ಎಂದರು.
ರಾಜ್ ಕುಮಾರ್ ಅವರ ಸದಭಿರುಚಿಯ ಸಿನಿಮಾಗಳನ್ನು ನೋಡಿ ನಾನು, ನನ್ನಂತಹ ಲಕ್ಷಾಂತರ ಮಂದಿ ಬದುಕಿನಲ್ಲಿ ಸ್ಫೂರ್ತಿ ಕಂಡವರು. ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದ ಇಂತಹ ಮಹಾ ಚೇತನಕ್ಕೆ ನನ್ನ ಪ್ರಣಾಮಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.