Advertisement

ಹಿಂದೆ ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ: ಕುಮಾರಸ್ವಾಮಿ

08:37 AM May 28, 2021 | Team Udayavani |

ಬೆಂಗಳೂರು: ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next