Advertisement
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ ಮಾಡುವುದರ ಹಿಂದಿನ ಹುನ್ನಾರ ಏನು ಎಂದು ಪ್ರಶ್ನಿಸಿದ್ದಾರೆ.
Related Articles
Advertisement
ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ ಎಂದು ಸರ್ಕಾರವನ್ನು ಕುಟುಕಿದ್ದಾರೆ.
ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.