Advertisement

ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

04:07 PM Jun 28, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Advertisement

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ ಮಾಡುವುದರ ಹಿಂದಿನ ಹುನ್ನಾರ ಏನು ಎಂದು ಪ್ರಶ್ನಿಸಿದ್ದಾರೆ.

ಮಾಸಿಕ 100 ಯುನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:ಭೂ ಪರಿಹಾರ ನೀಡಲು ನಿರ್ಲಕ್ಷ್ಯ: ಉಪವಿಭಾಗಾಧಿಕಾರಿ ವಾಹನ ಜಪ್ತಿ

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದು ಹೆಚ್ ಡಿಕೆ ಟೀಕಿಸಿದ್ದಾರೆ.

Advertisement

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ ಎಂದು ಸರ್ಕಾರವನ್ನು ಕುಟುಕಿದ್ದಾರೆ.

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next