Advertisement
ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.
Related Articles
Advertisement
ನಗರದ ಅಭಿವೃದ್ಧಿ, ಅನುದಾನ ಹಂಚಿಕೆಯಲ್ಲಿ ಬಿಜೆಪಿ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಮಾಜಿ ಸಚಿವ ಕಟ್ಟಾ ಮೇಲೆ ಚಾಟಿ ಬೀಸಿದ ಹೆಚ್ ಡಿಕೆ
ಹೆಬ್ಬಾಳ ವಿಧಾನಸಭೆ ಕ್ಷೇತ್ರದಿಂದ ಗೆದ್ದು ಮಂತ್ರಿಯಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಕಟುವಾದ ಟೀಕೆ ಮಾಡಿದ ಮಾಜಿ ಮುಖ್ಯಮಂತ್ರಿ, ಕಟ್ಟಾ ಅವರು ಈಗ ಹೆಣ್ಣುಮಕ್ಕಳಿಗೆ ಆರಶಿಣ-ಕುಂಕುಮ ಕೊಡುತ್ತೇನೆ, ಲಲಿತಾ ಸಹಸ್ರನಾಮ ಕಾರ್ಯಕ್ರಮ ಏರ್ಪಡಿಸುತ್ತೇನೆ ಎಂದು ಈಗ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಿಂದ ಜನರ ಬದುಕು ಹಸನಾಗುತ್ತದೆಯೇ? ಅಲ್ಲೆಲ್ಲ ದೊಡ್ಡದಾಗಿ ಮಹಿಳೆಯರನ್ನು ಸೇರಿಸಿ ಪೂಜೆ ಪುನಸ್ಕಾರ ಅಂತ ಹೇಳಿ ಮಂಕೂಬೂದಿ ಎರಚಿ, ಗೆದ್ದುಹೋಗಿ ಮಂತ್ರಿ ಆಗುತ್ತಾರೆ. ಆಮೇಲೆ, ಸರಕಾರಿ ಭೂಮಿಯನ್ನು ಲಪಟಾಯಿಸಿ ಬಳಿಕ ಜಾಮೀನಿಗಾಗಿ ಕೋರ್ಟು ಕಚೇರಿ ಅಂತ ಅಲೆಯುತ್ತಾರೆ ಎಂದು ಪ್ರಹಾರ ನಡೆಸಿದರು.
ಬೆಂಗಳೂರಿನಲ್ಲಿ ಇವತ್ತು ಅನೇಕ ರಾಜಕಾರಣಿಗಳು, ಸಾರ್ವಜನಿಕ ಹಾಗೂ ಬಡಬಗ್ಗರ ಭೂಮಿಯನ್ನು ಕೊಳ್ಳೆ ಹೊಡೆದು ನೂರಾರು ಕೋಟಿ ಮಾಡಿದ್ದಾರೆ. ಅದೇ ಪಾಪದ ಹಣದಿಂದ ಫುಡ್ ಕಿಟ್, ಸಣ್ಣಪುಟ್ಟ ಪ್ರಮಾಣದ ಭಕ್ಷೀಸು ನೀಡಿ ಚುನಾವಣೆ ಗೆಲ್ಲುತ್ತಿದ್ದಾರೆ. ಇಂಥ ಆಮಿಷಗಳಿಗೆ ಜನರು ಮಾರುಹೋಗಬಾರದು. ಹಣ ಪಡೆದು ಸಭೆ ಸಮಾರಂಭಗಳಿಗೆ ಹೋಗಬಾರದು ಎಂದು ಕುಮಾರಸ್ವಾಮಿ ಅವರು ಕರೆ ನೀಡಿದರು.
ಬೆಂಗಳೂರಿನಲ್ಲಿ ಬಡವರ ಬಂಧು ಕಾರ್ಯಕ್ರದ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ನೆರವಾದೆ. 25 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದೆ. ಇದೆಲ್ಲವನ್ನೂ ಫಲಾನುಭವಿಗಳ ಹೆಸರಿನ ಸಮೇತ ದಾಖಲೆ ಕೊಡಬಲ್ಲೆ, ನರೇಂದ್ರ ಮೋದಿ ಅವರಂತೆ ನಾನು ಬರೀ ಭಾಷಣ ಮಾಡಲ್ಲ ಎಂದರಲ್ಲದೆ, ಮೋದಿ ಹಿಂದೆ ಸುತ್ತುವ ಆತ್ಮೀಯನೊಬ್ಬ ಗಂಟೆಗೆ 53ಕೋಟಿ ದುಡಿಯುತ್ತಿದ್ದಾನಂತೆ. ಅದು ಹೇಗೆ? ಯಾವ ರೀತಿ? ಇಂಥವರನ್ನು ತೋರಿಸಿ ಭಾರತ ಉದ್ಧಾರವಾಗಿದೆ ಎಂದು ಜಗತ್ತಿಗೆ ತೋರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿದರು. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದ್ದೀನ್ ಅಲ್ತಾಫ್, ದಾಸರಹಳ್ಳಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಪಕ್ಷದ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು ಜನತಾಮಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇದಕ್ಕೂ ಮೊದಲು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ನಡೆದ ಜನತಾಮಿತ್ರ ಜಾಥ ಮತ್ತು ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸ್ಥಳೀಯ ಶಾಸಕ ಮಂಜುನಾಥ್ ಪಾಲ್ಗೊಂಡಿದ್ದರು.