Advertisement

ಬಿಜೆಪಿಗೆ ‘ಗ್ರಾಮ ಸ್ವರಾಜ್ಯ’ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಶಹಬ್ಬಾಸ್

04:09 PM Dec 03, 2020 | keerthan |

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗಾಗಿ ಬಿಜೆಪಿ ‘ಗ್ರಾಮ ಸ್ವರಾಜ್ಯ’ ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದಿದ್ದಾರೆ.

ಬಿಜೆಪಿಯ ಗ್ರಾಮ ಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆ ಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಪಿಎಫ್ಐ ಕಚೇರಿ, ಪದಾಧಿಕಾರಿಗಳ ಮನೆ ಮೇಲೆ ಇ.ಡಿ ದಾಳಿ: ಕರ್ನಾಟಕ ಸೇರಿ 9 ರಾಜ್ಯದಲ್ಲಿ ದಾಳಿ

‘ಗ್ರಾಮ ಸ್ವರಾಜ್ಯ’ ಸಮಾವೇಶಗಳು ಕೇವಲ ಪಕ್ಷ ಸಂಘಟನೆಗಷ್ಟೇ ಸೀಮಿತವಾದರೆ ಅದು ಸ್ವಾರ್ಥವಾಗುತ್ತದೆ. ಗ್ರಾಮಗಳನ್ನು ಸಶಕ್ತಗೊಳಿಸಲು ಈ ಕಾರ್ಯಕ್ರಮವನ್ನು ಬಿಜೆಪಿ ಬಳಸಿಕೊಂಡರೆ, ಗ್ರಾಮ ಸ್ವರಾಜ್ಯದ ಹೆಸರಿಗೆ ಅರ್ಥ ಸಿಗುತ್ತದೆ. ಹಳ್ಳಿ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂಬುದು ನನ್ನ ಅನಿಸಿಕೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸಲಿ ಎಂದು ಸಲಹೆ ನೀಡಿದ್ದಾರೆ.

Advertisement

ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ಯ ಕಾರ್ಯಕ್ರಮಗಳು ನೆರೆ ಪೀಡಿತ ಗ್ರಾಮಗಳನ್ನು ಕೇಂದ್ರೀಕರಿಸುವುದು ಅಗತ್ಯ. ಬಿಜೆಪಿ ನಾಯಕರು ಆ ಗ್ರಾಮಗಳಿಗೆ ಭೇಟಿ ನೀಡಲಿ. ಅಲ್ಲಿನ ಸಮಸ್ಯೆಗಳು, ಮನೆಗಳನ್ನು ಕಳೆದುಕೊಂಡ ನಿರಾಶ್ರಿತರ ಪರದಾಟ, ದುಃಖ ದುಮ್ಮಾನಗಳನ್ನು ಕಣ್ಣಾರೆ ಕಂಡು ಅವರಿಗೆ ಪರಿಹಾರ ಒದಗಿಸಬೇಕು ಎಂದು ಎಚ್ ಡಿಕೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next