Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ. ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್ ನಲ್ಲಿ 7.31 ಲಕ್ಷ ಹೆಕ್ಟೇರ್ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ ಎಂದಿದ್ದಾರೆ.
Related Articles
Advertisement
ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು. ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ ಎಂದು ಎಚ್ ಡಿಕೆ ಆಗ್ರಹಿಸಿದ್ದಾರೆ.
Koo Appಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ. ಜನಸ್ವರಾಜ್ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರಕಾರವು ಅಧಿಕಾರ ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬಾರದು. – H D Kumaraswamy (@h_d_kumaraswamy) 20 Nov 2021