Advertisement

ವಿಶ್ವಗುರು ಆಗುವುದೆಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ?HDK

11:14 AM Jan 08, 2022 | Team Udayavani |

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

Advertisement

ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ನವರು ವೋಟ್ ಬ್ಯಾಂಕ್ ಗಾಗಿ ಹೋರಾಟ ಮಾಡುತ್ತಿದ್ದಾರೆ: ಗೋವಿಂದ ಕಾರಜೋಳ

ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next