Advertisement

ಮೇಕೆದಾಟು ಕುರಿತ ತಮಿಳುನಾಡು ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ: ಕುಮಾರಸ್ವಾಮಿ

11:49 AM Mar 22, 2022 | Team Udayavani |

ಬೆಂಗಳೂರು: ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ಎಲ್ಲಾ ಪಕ್ಷಗಳು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ಬಿಲ್ ಪಾಸ್ ಮಾಡಿದ್ದಾರೆ. ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ, ಸರ್ಕಾರ ಬದ್ದತೆ ತೋರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಪಕ್ಕದ ರಾಜ್ಯಗಳ ಮೇಲೆ ಅದರಲ್ಲೂ ಕರ್ನಾಟಕದ ಮೇಲೆ ತಮಿಳುನಾಡು ಸರ್ಕಾರ ಒತ್ತಡ ಹೇರುವಂತದ್ದು ನಿರಂತರವಾಗಿ ನಡೆಯುತ್ತಿದೆ. ಬೆಂಗಳೂರು ನಗರಕ್ಕೆ ಹೆಚ್ಚುವರಿ ನೀರನ್ನು ಕುಡಿಯುವ ಹಕ್ಕಿದೆ. ಅವರ ನೀರನ್ನು ಕೊಡದಿದ್ದಾಗ ಅವರು ಕೇಳಬೇಕು ಎಂದರು.

ನಮ್ಮ ಭಾಗದಲ್ಲಿ ಜಲಾಶಯ ಕಟ್ಟಲು ತಕರಾರಿಲ್ಲ ಎಂದು ತಮಿಳುನಾಡು ವಕೀಲರು ಹೇಳಿದ್ದಾರೆ. ಕುಡಿಯುವ ನೀರಿಗೆ ಯಾವುದೇ ತಕಾರಾರಿಲ್ಲ ಎಂದು ಹೇಳಲಾಗಿದೆ. ನಮಗೆ ಎನ್ವಿರಾನ್ಮೆಂಟಲ್ ಕ್ಲಿಯರೆನ್ಸ್ ಬೇಕಾಗಿದೆ. ಸರ್ಕಾರದ ಕೈಯಲ್ಲಿದೆ. ನಮ್ಮ ನೀರನ್ನು ಪಡೆಯುವುದರಲ್ಲಿ ಅನ್ಯಾಯವಾಗಿದೆ, ಅದನ್ನು ಸರ್ಕಾರ ತ್ವರಿತಗತಿಯಲ್ಲಿ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ: ಸಿಎಂ ಬೊಮ್ಮಾಯಿ

ಮೇಕೆದಾಟು ಯೋಜನೆಯನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂದು ದೇವೆಗೌಡರು ಸರ್ಕಾರಕ್ಕೆ ಎರಡು ರೀತಿಯ ಸಲಹೆ ನೀಡಿದ್ದಾರೆ. ನಾನು ಕೂಡ ಸದನದಲ್ಲಿ ಪ್ರಸ್ತಾಪಿಸಿದ್ದೇನೆ. ಸರ್ವಪಕ್ಷ ನಾಯಕರನ್ನು ದೆಹಲಿಗೆ ಕರೆದೊಯ್ಯುವ ವಿಚಾರವನ್ನು ಸಭೆಯಲ್ಲಿ ಹೇಳಿದ್ದಾರೆ ಮೊದಲು ಸೋಮವಾರ ಗೋವಿಂದ ಕಾರಜೋಳ ದೆಹಲಿಗೆ ಹೋಗಿದ್ದಾರೆ. ನಂತರ ಸಂಸದರ ನಿಯೋಗ ಭೇಟಿ ಮಾಡಲಾಗುವುದು ಎಂದು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next