Advertisement
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಪಾಪದ ಕೊಡ ತುಂಬುತ್ತಿದೆ .ಬಿಜೆಪಿ ಮೀಸಲು ಮೋಸ ಎಂದು ಹ್ಯಾಷ್ ಟ್ಯಾಗ್ ಹಾಕಿದ್ದಾರೆ. ಚುನಾವಣೆ ಎಂಬ ಚದುರಂಗದಾಟದಲ್ಲಿ ರಾಜ್ಯ ಬಿಜೆಪಿ ಬಿಸಿಲುಗುದರೆಯ ಮೇಲೆ ಸವಾರಿ ಮಾಡುತ್ತಿದೆ, ಅಷ್ಟೇ ಅಲ್ಲ. ಕ್ರೂರ ವ್ಯಾಘ್ರನ ಮೇಲೂ ಕುಳಿತು ಕುರುಡಾಗಿ ಸರ್ಕಸ್ ಮಾಡುತ್ತಿದೆ. ಸಾಗು, ಇಲ್ಲವೇ ಹೋಗು ಎನ್ನುವ ದುಸ್ಥಿತಿಯಲ್ಲಿ ತೋಯ್ದಾಡುತ್ತಿದೆ. ಮತದ ಹೆಸರಿನಲ್ಲಿ ಮತಯುದ್ಧ ಗೆಲ್ಲಬಹುದೆಂದು ಚಟಕ್ಕೆ ಬಿದ್ದಿರುವ ರಾಜ್ಯ ಬಿಜೆಪಿ, ಈಗ ಸರ್ವಜನರ ಕಲ್ಯಾಣದ ಪ್ರತೀಕವಾದ ಕರ್ನಾಟಕದಲ್ಲಿ ಮೀಸಲು ಕಳ್ಳಾಟ ಆಡಿದೆ. ಗೆಲ್ಲಲೇಬೇಕು, ಗೆಲ್ಲದಿದ್ದರೆ ಇನ್ನೊಬ್ಬರ ತಟ್ಟೆಗೆ ಕೈ ಹಾಕು, ಆಗದಿದ್ದರೆ ಕಸಿದುಕೋ.. ಇದೇ ಕಮಲ ಪಕ್ಷದ ಕುಟಿಲತೆ ಎಂದು ಕುಟುಕಿದ್ದಾರೆ.
Related Articles
Advertisement
ಬಿಜೆಪಿ ಪಾಪದ ಕೊಡ ಭರ್ತಿ ಆಗಿದೆ. ರಾಜ್ಯವನ್ನು ಧರ್ಮದ ಹೆಸರಿನಲ್ಲಿ ವಿಭಜಿಸಿ, ಜಾತಿಜಗಳಕ್ಕೆ ತುಪ್ಪ ಸುರಿಯುತ್ತಿದೆ. ಅರಗಿನ ಮನೆಯಲ್ಲಿ ಪಾಂಡವರಿಗೆ ಕೊಳ್ಳಿ ಇಡಲು ಹೋಗಿ ಮುಂದೊಮ್ಮೆ ತಾವೇ ಎಸಗಿದ ಪಾಪಕುಂಡದಲ್ಲಿ ಬೆಂದು ಹೋದ ಕೌರವರಂತೆ, ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ.– ಎಚ್.ಡಿ.ಕುಮಾರಸ್ವಾಮಿ