Advertisement
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಚಿತ್ರನಟ ಕಿಚ್ಚ ಸುದೀಪ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Related Articles
Advertisement
ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ. ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ ‘ಫೂಲ್ ಔರ್ ಕಾಂಟೆ’ ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು ಎಂದಿದ್ದಾರೆ.
ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟು ಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.