Advertisement
ತೀರ್ಪು ಪ್ರಕಟವಾದ ನಂತರ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ “ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ..” ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ ಎಂದಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ದೇವೇಗೌಡರು, ಅಯೋಧ್ಯೆ ತೀರ್ಪನ್ನು ಸ್ವಾಗತಿಸುತ್ತೇವೆ. ಹಿಂದೂಗಳ ಬಹುದಿನಗಳ ಬಯಕೆ ಈಡೇರಿದೆ ಎಂದರು. ಆದರೆ ಮಸೀದಿ ಒಡೆದಿರುವುದು ತಪ್ಪು ಎಂದಿರುವುದರಿಂದ ಕೇಂದ್ರ ಸರಕಾರ ಪರಿಹಾರ ಕೊಡುತ್ತದೆಯೇ? ಪರಿಹಾರ ಕೊಟ್ಟರೆ ಒಳ್ಳೆಯದು ಎಂದರು.