Advertisement

ಸಂಕಷ್ಟದ ಸಮಯದಲ್ಲಿ ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಸ್ಪಂದಿಸಿ: ಎಚ್ ಡಿಕೆ ಮನವಿ

01:25 PM Jun 30, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕಿನ ಸಂದರ್ಭದಲ್ಲಿರುವ ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ನೆರವಿಗೆ ಧಾವಿಸಬೇಕು ಎಂದಿದ್ದಾರೆ.

ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಎಚ್ ಡಿಕೆ ಮನವಿ ಮಾಡಿದ್ದಾರೆ.

ಲಾಕ್ ಡೌನ್ ಬಳಿಕ ಆರ್ಥಿಕ ಸಂಕಷ್ಟದ ಬಗ್ಗೆ ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟು ಎಂಟು ಮಂದಿ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next