Advertisement

ಪೊಲೀಸರಿಗೆ, ವೈದ್ಯರಿಗೆ ಸಲವತ್ತು ಕೊಡಿ; ಸಾವಿರ ವೆಂಟಿಲೇಟರ್, 10 ಲಕ್ಷ ಮಾಸ್ಕ್ ಎಲ್ಲಿ: HDK

09:28 AM Mar 29, 2020 | keerthan |

ಬೆಂಗಳೂರು: ಕೋವಿಡ್-19 ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನಿಸಿ ಮಾಜಿಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಆದರೂ ಕರ್ನಾಟಕ ಕೋವಿಡ್-19 ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

Advertisement

ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಮಾಸ್ಕ್ ಗಳು, ಐದು ಲಕ್ಷ ತ್ರೀ ಲೇಯರ್ ಮಾಸ್ಕ್ ಖರೀದಿಸುವುದಾಗಿ ಹೇಳಿ ಸರಕಾರ ಒಂದು ವಾರವಾಯ್ತು. ಕ್ಷಿಪ್ರಗತಿಯಲ್ಗಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ಎಚ್ ಡಿ ಕುಮಾರಸ್ವಾಮಿಯವರ ಸರಣಿ ಟ್ವೀಟ್ ಗಳು ಇಲ್ಲಿವೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next