Advertisement

ಹಣ ನುಂಗುತ್ತಿರುವ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ವ್ಯವಸ್ಥೆಯನ್ನು ಮೋದಿ ಕೊನೆಗಾಣಿಸಲಿ: HDK

03:31 PM Mar 21, 2021 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ ಎಂದರು.

ಕರ್ನಾಟಕದ ಸರ್ಕಾರದಲ್ಲೇ ‘ಏಕಗವಾಕ್ಷಿ’ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಎಚ್ ಡಿಕೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next