ಬೆಂಗಳೂರು: ಕೊರೊನಾ ವೈರಸ್ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ, ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಒಂದು ವೇಳೆ ಹಾಗೆ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ ಎಂದು ಸರಕಾರವನ್ನು ಎಚ್ಚರಿಸಿದ್ಧಾರೆ.
ಕೊರೊನಾ ಶಂಕಿತರಿಗೆ ಆಸ್ಪತ್ರೆಯಲ್ಲಿ ಇತರ ರೋಗಿಗಳ ನಡುವೆ ಚಿಕಿತ್ಸೆ ನೀಡುವ ಬದಲು ಖಾಲಿ ಇರುವ ಸರಕಾರಿ ಕಟ್ಟಡಗಳಲ್ಲಿ ಚಿಕಿತ್ಸೆ ನೀಡಬಹುದು. ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ ಎಂದಿದ್ಧಾರೆ.
ಎಚ್ ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಗಳು ಇಲ್ಲಿವೆ.