Advertisement
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ, #SaveRamanagara ಎಂಬ ಹ್ಯಾಷ್ ಟ್ಯಾಗ್ ಬಳಸಿ ಬಿ ಎಸ್ ಯಡಿಯೂರಪ್ಪ ಸರಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.
Related Articles
Advertisement
3. ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪ.
4. ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ.
5. ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ?
6. ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ.
7. ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ.
8. ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ.
9. ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ.
10. ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.