Advertisement

ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ, ಆದರೆ..: ಕಾರ್ಯಕರ್ತರಿಗೆ ಕುಮಾರಸ್ವಾಮಿ ಮನವಿ

01:07 PM Jul 10, 2021 | Team Udayavani |

ಬೆಂಗಳೂರು: ಕೆಆರ್ ಎಸ್ ಜಲಾಶಯ, ಅಂಬರೀಶ್ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಮಾತಿನ ಸಮರದ ಬಳಿಕ ಇದೀಗ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ.

Advertisement

ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಎಚ್ ಡಿಕೆ ಹೇಳಿದ್ದಾರೆ.

ಇದನ್ನೂ ಓದಿ:ರಾಜಕೀಯ ಜಟಾಪಟಿ : ಸಂಸದೆ ಸುಮಲತಾ–ನಿರ್ಮಾಪಕ ರಾಕ್ ಲೈನ್ ಮನೆಗೆ ಪೊಲೀಸ್ ಭದ್ರತೆ

ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ. ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ ಎಂದು ಕಾರ್ಯಕರ್ತರಿಗೆ ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ನಾನು ಮನಸ್ಸು ಮಾಡಿದರೆ ಎಂಎಲ್‌ಎ, ಎಂಪಿ ಆಗುತ್ತೇನೆ: ರಾಕ್‌ಲೈನ್‌ ವೆಂಕಟೇಶ್

Advertisement

ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next