ಬೆಂಗಳೂರು: ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ, ನೀವು ತಳೆದ ನಿಲುವಿನ ಬಗ್ಗೆ ನಿಮ್ಮದೇ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಾದ ನೀವು ಇಂತಹವುಗಳಿಗೂ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೋಮಿನ ವಿರುದ್ಧ ಯಾರೂ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದರು.
‘