Advertisement

H.D.Kumarswamy: ಕೆಂಪೇಗೌಡರು ಯಾರೊಬ್ಬರ ಸೊತ್ತು ಅಲ್ಲ, ಕನ್ನಡಿಗರೆಲ್ಲರ ಆಸ್ತಿ

12:05 PM Jun 27, 2024 | Team Udayavani |

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಹೃದಯದಲ್ಲಿ ಗೌರವವಿದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ನವದೆಹಲಿಯಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು.

ಕೆಂಪೇಗೌಡರ ಜಯಂತಿಗೆ ನನಗೆ ಆಹ್ವಾನ ಇಲ್ಲ, ನನ್ನ ಹೃದಯದಲ್ಲಿ ನಾಡಪ್ರಭುಗಳು ಇದ್ದಾರೆ. ಅವರು ಕಾರ್ಯಕ್ರಮಕ್ಕೆ ಕರೆಯದಿರುವುದಕ್ಕೆ ನನಗೆ ಬೇಸರವಿಲ್ಲ, ನಾನು ಈ ವಿಚಾರಕ್ಕೆ ಮಹತ್ವ ಕೊಡು ವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ನಾನು ಯಾವಾಗಲೂ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿ ಎಂದು ಹೇಳುವುದಿಲ್ಲ. ಪ್ರೀತಿಯಿಂದ ಕರೆದರೆ ಹೋಗುತ್ತೇನೆ. ನಾನು ಈಗ ದೆಹಲಿಯಲ್ಲಿ ಸಂಸತ್‌ ಕಲಾಪದಲ್ಲಿ ಭಾಗಿಯಾಗಿದ್ದೇನೆ. ಗುರುವಾರ ರಾಷ್ಟ್ರಪತಿಗಳು ಸಂಸತ್ತಿನ ಜಂಟಿ ಸದನ್ನ ಉದ್ದೇಶಿಸಿ ಭಾಷಣ ಮಾಡಲಿ¨ªಾರೆ. ಅವರು ಕರೆದಿದ್ದರೂ ಹೋಗಲು ಆಗುತ್ತಿರಲಿಲ್ಲ ಎಂದರು.

ನಾನು 2 ಬಾರಿ ರಾಜ್ಯದ ಮುಖ್ಯಮಂತ್ರಿ ಆದಾಗಲೂ ಕೆಂಪೇಗೌಡರ ಹಿರಿಮೆಗೆ ಧಕ್ಕೆ ಆಗದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕೋ ಹಾಗೆ ನಡೆದುಕೊಂಡಿದ್ದೇನೆ. ನಾನು ದೆಹಲಿಯಲ್ಲಿಯೇ ಕೆಂಪೇಗೌಡರನ್ನು ಸ್ಮರಣೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

Advertisement

ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಕೆಂಪೇಗೌಡರು. ಅವರು ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾ ದರೂ ಆ ಕೆರೆಗಳನ್ನು ಕಾಪಾಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿಯುವ ನೀರು ತರುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಗರದ ಜಲಮೂಲಗಳಾಗಿದ್ದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸರ್ಕಾರ ನ್ಯಾಯಯುತವಾಗಿ ಕೆಂಪೇಗೌಡರ ಜಯಂತಿ ಆಚರಿಸುವುದಾದರೆ ಕೆರೆಗಳ ರಕ್ಷಣೆ ಮಾಡಲಿ. ಮಳೆ ನೀರನ್ನು ಸರಿಯಾಗಿ ಬಳಸಿಕೊಳ್ಳುವತ್ತ ಚಿಂತಿಸಲಿ. ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸೆಲ್ಯೂಟ್‌ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಕೆಂಪೇಗೌಡ ಜಯಂತಿಗೆ ಎಚ್‌ಡಿಡಿ, ಎಚ್‌ಡಿಕೆಗೆ ಆಹ್ವಾನ ಇಲ್ಲ: ಒಕ್ಕಲಿಗ ಸಂಘದಿಂದ ಆಕ್ಷೇಪ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸದಿರುವುದು ಒಕ್ಕಲಿಗ ಸಮಾಜಕ್ಕೆ ಅವಮಾನದ ವಿಚಾರ ಎಂದು ರಾಜ್ಯ ಒಕ್ಕಲಿಗರ ಸಂಘ ಹೇಳಿದೆ. ಕೆಂಪೇಗೌಡರ ಜಯಂತಿಯನ್ನು ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ. ಆದರೆ ಈ ಇಬ್ಬರು ಹಿರಿಯ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವ ಸರ್ಕಾರದ ಧೋರಣೆಯನ್ನು ಒಕ್ಕಲಿಗ ಸಮು ದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘ ಖಂಡಿಸು ತ್ತದೆ ಎಂದು ಸಂಘದ ಸದಸ್ಯರು ತಿಳಿಸಿದ್ದಾರೆ. ಆಹ್ವಾನ ಪತ್ರಿಕೆ ಯಲ್ಲಿ ರಾಜ್ಯದಿಂದ ಸಚಿವರಾಗಿ ರುವ ನಿರ್ಮಲಾ ಸೀತಾರಾಮನ್‌, ಶೋಭಾ, ಕರಂದ್ಲಾಜೆ, ವಿ.ಸೋಮಣ್ಣ ಹೆಸರನ್ನು ಉಲ್ಲೇಖೀಸಲಾಗಿದ್ದು, ಎಚ್‌.ಡಿ. ಕುಮಾರಸ್ವಾಮಿ, ಎಚ್‌.ಡಿ.ದೇವೇಗೌಡ ಹೆಸರನ್ನು ಪ್ರಸ್ತಾಪಿಸಿಲ್ಲದಿ ರುವುದು ಈಗ ವಿವಾದಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next