Advertisement

ಎಪಿಎಂಸಿ ಕಾಯ್ದೆ ಸುಗ್ರೀವಾಜ್ಞೆ ಕೈಬಿಡಿ, ಇಲ್ಲವಾದರೆ ಹೋರಾಟ ಎದುರಿಸಿ: ಸರಕಾರಕ್ಕೆ ಎಚ್ ಡಿಕೆ

08:43 AM May 15, 2020 | keerthan |

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡುವ ಕುರಿತು ಇಂದು ಸಚಿವ ಸಂಪುಟದಲ್ಲಿ ನಿರ್ಧಾರವಾಗಲಿದ್ದು, ರೈತರಿಗೆ ಸಂಕಷ್ಟ ತರುವ ಈ ನಡೆಯನ್ನು ಸರಕಾರ ಕೈಬಿಡಬೇಕು ಇಲ್ಲವಾದರೆ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ. ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು. ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದಿದ್ದಾರೆ.

ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ. ಅಭದ್ರತೆಯ ಈ ವ್ಯವಸ್ಥೆಗೆ ಕೃಷಿ, ರೈತರನ್ನು ಒಳಪಡಿಸುವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. ₹20 ಲಕ್ಷ ಕೋಟಿ ಪ್ಯಾಕೇಜ್ ವೇಳೆ ‘ಲೋಕಲೈಸೇಶನ್’ ಬಗ್ಗೆ ಮೋದಿ ಮಾತನಾಡಿದ್ದರು. ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವ ‘ಲೋಕಲೈಸೇಶನ್’? ಎಂದು ಪ್ರಶ್ನಿಸಿದ್ದಾರೆ.

ರೈತ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಒಂದು ವೇಳೆ ವಂಚನೆಗೊಳಗಾದರೆ ಎಪಿಎಂಸಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆದರೆ ಬಹುರಾಷ್ಟ್ರೀಯ ಕಂಪನಿಗಳು ಮಾಡುವ ವಂಚನೆಗಳ ವಿರುದ್ಧ ನಮ್ಮ ರೈತರು ಹೋರಾಡಬಲ್ಲರೇ? ಅವರ ಕೂಟ ವ್ಯವಸ್ಥೆಯ ಎದುರು ಸೆಣಸಬಲ್ಲರೇ? ಕೃಷಿ ವ್ಯವಸ್ಥೆಗೆ ಕಾಯಕಲ್ಪ ತರಬೇಕು. ಆದರೆ ದಾಸ್ಯಕ್ಕೊಳಪಡಿಸಬಾರದು ಎಂದು ಎಚ್ ಡಿ ಕುಮಾರಸ್ವಾಮಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next