Advertisement

ವಿಶಾಖಪಟ್ಟಣ ವಿಷಾನಿಲ ದುರಂತ ದುರದೃಷ್ಟಕರ: ಕುಮಾರಸ್ವಾಮಿ ಸಂತಾಪ

02:58 PM May 07, 2020 | keerthan |

ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ದುರಂತ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ದುಖಃ ವ್ಯಕ್ತಪಡಿಸಿದ್ದಾರೆ. ಈ ದುರಂತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳನ್ನು ಸೂಚಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರವಹಿಸಬೇಕು. ಈ ಘಟನೆಯಿಂದ ಸಂಕಟಕ್ಕೆ ಒಳಗಾದವರು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇಂದು ಮುಂಜಾನೆ ವಿಶಾಖಪಟ್ಟಣದ ನಾಯ್ಡು ತೋಟಾ ಸಮೀಪದ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ನಲ್ಲಿ ವಿಷಾನಿಲ ಸೋರಿಕೆಯಾಗಿದೆ. ಈ ಗಾಳಿಯನ್ನು ಸೇವಿಸಿದವರು ಅಸ್ವಸ್ಥರಾಗಿದ್ದಾರೆ. ಓರ್ವ ಬಾಲಕಿ, ಇಬ್ಬರು ವೃದ್ಧರು ಸೇರಿದಂತೆ ಹನ್ನೊಂದು ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಅಸ್ವಸ್ಥರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next